ವಿರಾಟ್ ಕೊಹ್ಲಿ ಮಾನಸಿಕವಾಗಿ ಬಳಲಿದ್ದಾರೆ.. ಏಕದಿನ ತಂಡದ ನಾಯಕತ್ವದಿಂದಲೂ ಹೊರಬರಬಹುದು – ರವಿಶಾಸ್ತ್ರಿ

1 min read
ravi shastri virat kohli team india saakshatv

virat kohli team india saakshatvಟೀಮ್ ಇಂಡಿಯಾದ ಏಕದಿನ ಕ್ರಿಕೆಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ತ್ಯಜಿಸಬಹುದು ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ವಿರಾಟ್ ಸಾರಥ್ಯದ ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ ನಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದೆ. ಅಲ್ಲದೆ ನಂಬರ್ ವನ್ ಸ್ಥಾನದಲ್ಲಿದೆ. ಆದ್ರೂ ಬ್ಯಾಟಿಂಗ್ ಕಡೆ ಗಮನ ಹರಿಸುವ ದೃಷ್ಟಿಯಿಂದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ತಂಡದ ನಾಯಕತ್ವ ಹುದ್ದೆಯಿಂದ ಕೆಳಗಿಳಿಯಬಹುದು ಎಂಬ ಅಭಿಪ್ರಾಯವನ್ನು ರವಿಶಾಸ್ತ್ರಿ ಅವರು ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಮಾನಸಿಕವಾಗಿ ಸಾಕಷ್ಟು ಬಳಲಿದ್ದಾರೆ. ಹೀಗಾಗಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ವಿರಾಟ್ ಈ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಜೊತೆಗೆ ವಿರಾಟ್ ಕೊಹ್ಲಿ ಫಿಟ್ ನೆಸ್ ಕಡೆಗೂ ಗಮನಹರಿಸಲಿದ್ದಾರೆ. 33ರ ಹರೆಯದ ವಿರಾಟ್ ಕೊಹ್ಲಿ ಫಿಟ್ ನೆಸ್ ವಿಚಾರದಲ್ಲಿ ಮುಂಚೂಣಿಯಲ್ಲಿದ್ದಾರೆ. ಆದ್ರೆ ಭವಿಷ್ಯದ ದೃಷ್ಟಿಯಿಂದ ಬ್ಯಾಟಿಂಗ್ ಕಡೆಗೆ ಗಮನ ಹರಿಸಲಿದ್ದಾರೆ. ಆದ್ರೂ ಟೆಸ್ಟ್ ತಂಡದ ಸಾರಥಿಯಾಗಿ ಮುಂದುವರಿಯಬಹುದು ಎಂಬುದು ರವಿಶಾಸ್ತ್ರಿಯವರ ಅಭಿಮತವಾಗಿದೆ.
ಟಿ-20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಅವರು ಭಾರತದ ಟಿ-20 ತಂಡದ ನಾಯಕತ್ವವನ್ನು ತ್ಯಜಿಸಿದ್ದರು. ರೋಹಿತ್ ಶರ್ಮಾ ಅವರು ಕೊಹ್ಲಿಯವರ ಸ್ಥಾನವನ್ನು ಅಲಂಕರಿಸಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಅದ್ಭುತವಾದ ಪ್ರದರ್ಶನವನ್ನು ನೀಡಿತ್ತು. ಆದ್ರೆ ಯಾವುದೇ ಐಸಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿಲ್ಲ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd