Virat Kohli : ಶೂನ್ಯಕ್ಕೆ ವಿರಾಟ್ ಕೊಹ್ಲಿ ಔಟ್..!! virat-kohli-out for a duck in 3rd ODi WIvsIND saaksha tv
ಅಹಮದಾಬಾದ್ ಮೈದಾನದಲ್ಲಿ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೆ ವಿಫಲರಾಗಿದ್ದಾರೆ.
ಇನ್ನಿಂಗ್ಸ್ ನ 3.5ನೇ ಓವರ್ ನಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಆ ಮೂಲಕ ಮತ್ತೆ ನಿರಾಸೆ ಅನುಭವಿಸಿದ್ದಾರೆ.
ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ, ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ.
13 ರನ್ ಗಳಿಸಿದ್ದ ರೋಹಿತ್ ಶರ್ಮಾ ಜೋಸೆಫ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಇದರ ಪರಿಣಾಮ ಕ್ರೀಸ್ ಗೆ ಬಂದ ವಿರಾಟ್ 2 ಎಸೆತಗಳನ್ನು ಎದುರಿಸಿ ಹೊಪೆಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು.
ಕಳೆದ ಮೂರು ಪಂದ್ಯಗಳಲ್ಲಿ ವಿಫಲ
ಹೌದು..! ವಿಂಡೀಸ್ ವಿರುದ್ದದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಮೊದಲ ಪಂದ್ಯದಲ್ಲಿ 8 ರನ್ ಗಳನ್ನು ಗಳಿಸಿದ್ದ ವಿರಾಟ್ ಎರಡನೇ ಪಂದ್ಯದಲ್ಲಿ 18 ರನ್ ಗಳಿಗೆ ಔಟ್ ಆದರು. ಇಂದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.









