ViratKohli | ವಿಶ್ವ ದಾಖಲೆಯತ್ತ ವಿರಾಟ್ ಕೊಹ್ಲಿ virat-kohli-ready-become-top-run-scorer-t20 saaksha tv
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಿದೆ.
ವಿಂಡೀಸ್ ಮತ್ತು ಭಾರತ ನಡುವಿನ ಮೂರು ಪಂದ್ಯಗಳ T20 ಸರಣಿಯು ಫೆಬ್ರವರಿ 16 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಪ್ರಾರಂಭವಾಗಲಿದೆ.
ಈ ಮಧ್ಯೆ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಈ ಸಿರೀಸ್ ನಲ್ಲಿ ಕೇವಲ 75 ರನ್ ಗಳಿಸಿದ್ರೆ ವಿಶ್ವದಾಖಲೆ ನಿರ್ಮಿಸಲಿದ್ದಾರೆ.
ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ 75 ರನ್ ಗಳಿಸಿದ್ರೆ ವಿಶ್ವ ಟಿ 20 ಕ್ರಿಕೆಟ್ ನ ಕಿಂಗ್ ಆಗಲಿದ್ದಾರೆ.
ಅಂದರೇ ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಆಗಿ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಲಿದ್ದಾರೆ.
ಅಂದಹಾಗೆ ಟಿ 20 ಕ್ರಿಕೆಟ್ ನಲ್ಲಿ ಅತಿಹೆಚ್ಚು ರನ್ ಗಳಿಸಿರುವ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ನ ಬ್ಯಾಟರ್ ಮಾರ್ಟಿನ್ ಗುಪ್ಟಿಲ್ 3299 ರನ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ಎರಡನೇ ಸ್ಥಾನದಲ್ಲಿ 3227 ರನ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಇದ್ದಾರೆ.
ಇದಲ್ಲದೇ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಕೂಡ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಲಿದ್ದಾರೆ.
ಇನ್ನೂ ಕೇವಲ ಒಂದೇ ಒಂದು ವಿಕೆಟ್ ಪಡೆದರೇ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆಯಲಿದ್ದಾರೆ.
ಈ ಪಟ್ಟಿಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ. ಅವರು 66 ವಿಕೆಟ್ ಪಡೆದಿದ್ದಾರೆ. ಚಹಾಲ್ 65 ವಿಕೆಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.