Virat Kohli : ಲಂಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಬರೆದು ಎಷ್ಟು ಗೊತ್ತಾ?
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತವರಿನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಈ ಸರಣಿಯಲ್ಲಿ ಮೂರಂಕಿ ಮುಟ್ಟಿ ಸಂಭ್ರಮಿಸಿದ್ದಾರೆ.
ಈ ಶತಕದ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 74 ನೇ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಅಲ್ಲದೆ ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ 46ನೇ ಶತಕ ಸಿಡಿಸಿದ್ದಾರೆ. ಇನ್ನು ಭಾರತದಲ್ಲಿ ಗರಿಷ್ಠ ಬಾರಿ 100ಕ್ಕೂ ಹೆಚ್ಚು ರನ್ ಗಳನ್ನು ಬಾರಿಸಿದ ಆಟಗಾರ ಎಂಬ ಶ್ರೇಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಖ್ಯಾತಿಯ ಸಚಿನ್ ತೆಂಡುಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ಭಾರತದಲ್ಲಿ ಒಟ್ಟು 20 ಶತಕ ಬಾರಿಸಿ ಆರ್ಭಟಿಸಿದ್ದಾರೆ.
ವಿರಾಟ್ ಕೊಹ್ಲಿ ಇದೇ ಪಂದ್ಯದಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಕರುಣರತ್ನೆ ಎಸೆತದ 35ನೇ ಓವರ್ನ ಮೊದಲ ಎಸೆತದಲ್ಲಿ ಕೊಹ್ಲಿ ಬೌಂಡರಿ ಬಾರಿ ಬಾರಿಸುತ್ತಿದ್ದಂತೆ ವಿಶ್ವ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಐದನೇ ಬ್ಯಾಟರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆಯ ರೆಕಾರ್ಡ್ ಬ್ರೇಕ್ ಮಾಡಿದರು.
ಅಲ್ಲದೇ ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಒಂದು ತಂಡದ ವಿರುದ್ಧ ಗರಿಷ್ಠ ಶತಕ ಬಾರಿಸಿ ಬ್ಯಾಟರ್ ಎನಿಸಿಕೊಂಡರು. ಮೊದಲ ಪಂದ್ಯದಲ್ಲಿ ವಿರಾಟ್ ಶತಕ ಬಾರಿಸಿ, ಸಚಿನ್ ಅವರ ದಾಖಲೆಯ ಸಮಕ್ಕೆ ನಿಂತಿದ್ದರು. ಸಚಿನ್ ಒಂದೇ ತಂಡದ ವಿರುದ್ಧ 9 ಶತಕ ಬಾರಿಸಿ ಸಾಧನೆ ಮಾಡಿದ್ದಾರೆ.
Team IndiaHow much do you know about Virat Kohli’s record