Virat | ಅನುಷ್ಕಾ ಆಸೆ ಈಡೇರಿಸಿದ ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಮುಂಬೈನ ಬೀದಿಗಳಲ್ಲಿ ಸ್ಕೂಟಿಯಲ್ಲಿ ಸುತ್ತಾಡಿದ್ದಾರೆ.
ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸದ್ಯ ಜಿಂಬಾಬ್ವೆ ಪ್ರವಾಸದಿಂದ ದೂರವಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರ ಆಸೆಯಂತೆ ಮುಂಬೈನ ಬೀದಿಗಳಲ್ಲಿ ಸುತ್ತಾಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬ್ಯಾಡ್ ಫಾರ್ಮ್ ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ, ಐಪಿಎಲ್ ಸೇರಿದಂತೆ ಇಂಗ್ಲೆಂಡ್ ಪ್ರವಾಸದಲ್ಲಿ ಕಳಫೆ ಪ್ರದರ್ಶನ ನೀಡಿದ್ದರು.
ಹೀಗಾಗಿ ಅವರಿಗೆ ವೆಸ್ಟ್ ಇಂಡೀಸ್, ಜಿಂಬಾಬ್ವೆ ಸರಣಿಗಳಿಂದ ವಿಶ್ರಾಂತಿ ನೀಡಲಾಗಿದ್ದು, ಏಷ್ಯಾಕಪ್ ಗೆ ಆಯ್ಕೆ ಮಾಡಲಾಗಿದೆ.
28 ರಂದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದು ವಿರಾಟ್ ಕೊಹ್ಲಿಗೆ ನೂರನೇ ಟಿ 20 ಪಂದ್ಯವಾಗಿದೆ.