Virat Kohli – ವಿಶ್ವದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ ನಲ್ಲಿ ಅದ್ಭುತ ಫಾರ್ಮ್ ನಲ್ಲಿರುವ ಟೀಂ ಇಂಡಿಯಾದ ಬ್ಯಾಟರ್ ವಿರಾಟ್ ಕೊಹ್ಲಿ ಮಹತ್ವದ ಮೈಲಿಗಲ್ಲು ದಾಟುವ ಸನಿಹದಲ್ಲಿದ್ದಾರೆ.
ಸದ್ಯ ವಿಶ್ವಕಪ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಗಳ ಲೀಸ್ಟ್ ನಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 68 ರನ್ ಗಳಿಸಿದ್ರೆ ವಿಶ್ವದಾಖಲೆ ನಿರ್ಮಿಸಲಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಮಿಂಚುತ್ತಿರುವ ಕೊಹ್ಲಿ, T20Iನಲ್ಲಿ 4000 ಸಾವಿರ ರನ್‌ಗಳನ್ನ ಪೂರೈಸುವ ಹೊಸ್ತಿಲಲ್ಲಿದ್ದಾರೆ.

ಈ ಮೈಲಿಗಲ್ಲು ತಲುಪಲು ಕಿಂಗ್ ಕೊಹ್ಲಿಗೆ 68 ರನ್‌ಗಳ ಅಗತ್ಯವಿದೆ.
ಹೀಗಾಗಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದೇ ಆದಲ್ಲಿ, ಟಿ20 ಕ್ರಿಕೆಟ್‌ನಲ್ಲಿ 4000 ರನ್‌ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈವರೆಗೂ 113 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ, 53.13ರ ಬ್ಯಾಟಿಂಗ್ ಸರಾಸರಿಯಲ್ಲಿ ಒಟ್ಟು 3932 ರನ್‌ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 36 ಅರ್ಧಶತಕಗಳಿವೆ.








