Virat kohli : 72ನೇ ಶತಕ ಸಿಡಿಸಿದ ಕಿಂಗ್ ಕೊಹ್ಲಿ..!!
ವಿರಾಟ್ ಕೊಹ್ಲಿ ಬಾಂಗ್ಲಾ ವಿರುದ್ಧ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 72 ಶತಕ ಪೂರೈಸಿದ ಸಾಧನೆ ಮಾಡಿದರು.
ಚಿತ್ತಗಾಂಗ್ ಮೈದಾನದಲ್ಲಿ ವಿರಾಟ್ ಕೊಹ್ಲಿ ಇಶಾನ್ ಕಿಶನ್ ಜೊತೆ ಎರಡನೆ ವಿಕೆಟ್ಗೆ 31.4 ಓವರ್ ಆಡಿ ಬರೋಬ್ಬರಿ 290 ರನ್ ಜೊತೆಯಾಟ ಆಡಿದರು.
ವಿರಾಟ್ ಕೊಹ್ಲಿ 11 ಬೌಂಡರಿ 2 ಸಿಕ್ಸರ್ ಒಟ್ಟು 113 ರನ್ ಗಳಿಸಿದರು.
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ 71 ಶತಕಗಳ ದಾಖಲೆಯನ್ನು ಮುರಿದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಎರಡನೆ ಬ್ಯಾಟರ್ ವಿರಾಟ್ ಕೊಹ್ಲಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ 536 ಇನ್ನಿಂಗ್ಸ್ ಗಳಲ್ಲಿ 72 ಶತಕ ಪೂರೈಸಿದ್ದಾರೆ. ರಿಕಿ ಪಾಂಟಿಂಗ್ 71 ಶತಕ ಪೂರೈಸಲು 668 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಸಚಿನ್ ತೆಂಡೂಲ್ಕರ್ 100 ಶತಕ ಪೂರೈಸಲು 782 ಇನ್ನಿಂಗ್ಸ್ ತೆಗೆದುಕೊಂಡಿದ್ದರು.
ನೂರು ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 3 ವರ್ಷಗಳ ಬಳಿಕ ಶತಕ ಸಿಡಿಸಿದ್ದಾರೆ. 2019 ಆಗಸ್ಟ್ 14 ವಿಂಡೀಸ್ ವಿರುದ್ಧ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ಮತ್ತೊಂದು ಏಕದಿನ ಕ್ರಿಕೆಟ್ನಲ್ಲಿ ಶತಕ ಸಿಡಿಸಲು ವಿರಾಟ್ 3 ವರ್ಷ 4 ತಿಂಗಳು ಸಮಯ ತೆಗೆದುಕೊಂಡಿದ್ದಾರೆ.








