King Kohli | ಕ್ಯಾಪ್ಟನ್ಸಿಯಿಂದ ಕೆಳಗಿಳಿದ್ರೂ ತಗ್ಗದ ಕೊಹ್ಲಿ ಕ್ರೇಜ್…!!
ಟೀಂ ಇಂಡಿಯಾ ಮೆಷಿನ್ ಗನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಅಪರೂಪದ ಗೌರವಕ್ಕೆ ಪಾತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ಎಲ್ಲಾ ಫಾರ್ಮ್ಯಾಟ್ಗಳ ನಾಯಕತ್ವದಿಂದ ಕೆಳಗಿಳಿದಿದ್ದರೂ ಕೊಹ್ಲಿ ಕ್ರೇಜ್ ಕಡಿಮೆಯಾಗಿಲ್ಲ.
2022 ರ ಜನವರಿ ತಿಂಗಳಿನಲ್ಲಿ ಭಾರತದ ಅತ್ಯಂತ ಜನಪ್ರಿಯ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಓರ್ಮ್ಯಾಕ್ಸ್ ಮೀಡಿಯಾ ಜನವರಿ ತಿಂಗಳಿಗೆ ಹೆಚ್ಚು ಜನಪ್ರಿಯ ಆಟಗಾರರು ಯಾರು ಎಂಬುದರ ಕುರಿತು ಸಮೀಕ್ಷೆಯನ್ನು ನಡೆಸಿತು.
ಸಮೀಕ್ಷೆಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ಮಾಜಿ ನಾಯಕ ಎಂಎಸ್ ಧೋನಿ ಎರಡನೇ ಸ್ಥಾನದಲ್ಲಿದ್ದರೆ, ಪ್ರಸ್ತುತ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.
ಏಕದಿನದಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದವರ ಪೈಕಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ಐಸಿಸಿ ಶ್ರೇಯಾಂಕದಲ್ಲಿ ಏಕದಿನ ರ್ಯಾಂಕಿಂಗ್ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ,
ಟೆಸ್ಟ್ ಶ್ರೇಯಾಂಕದಲ್ಲಿ ಏಳನೇ ಮತ್ತು ಟಿ20 ರ್ಯಾಂಕಿಂಗ್ನಲ್ಲಿ ಹತ್ತನೇ ಸ್ಥಾನದಲ್ಲಿದ್ದಾರೆ.
ಸಾರ್ವಕಾಲಿಕ ಪ್ರತಿಭಾನ್ವಿತ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕೊಹ್ಲಿ ಹೆಚ್ಚು ಜನಾಭಿಮಾನವನ್ನು ಸಂಪಾದಿಸಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ಇನ್ನುಳಿದ ಸ್ಥಾನಗಳ ವಿಚಾರಕ್ಕೆ ಬಂದರೆ.. ನಾಲ್ಕನೇ ಸ್ಥಾನದಲ್ಲಿ ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗ.. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದಾರೆ.
ಫುಟ್ಬಾಲ್ ಸ್ಟಾರ್ ಆಟಗಾರರಾದ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪೀವಿ ಸಿಂಧು (ಬ್ಯಾಡ್ಮಿಂಟನ್) ಏಳನೇ ಸ್ಥಾನದಲ್ಲಿದ್ದರೆ, ಸೈನಾ ನೆಹ್ವಾಲ್ ಎಂಟನೇ ಸ್ಥಾನದಲ್ಲಿದ್ದಾರೆ.
ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಒಂಬತ್ತನೇ ಸ್ಥಾನದಲ್ಲಿದ್ದರೆ, ಇತ್ತೀಚೆಗಷ್ಟೇ ಟೆನಿಸ್ ಗೆ ವಿದಾಯ ಹೇಳಿರುವ ಸಾನಿಯಾ ಮಿರ್ಜಾ ಹತ್ತನೇ ಸ್ಥಾನದಲ್ಲಿದ್ದಾರೆ.
Virat Kohli tops the list of most popular sportspersons saaksha tv









