ದ್ರಾವಿಡ್ ಜೊತೆ ಮಾತನಾಡಿದ ಬಳಿಕ ವಿರಾಟ್ ವಿದಾಯ rahul Dravid saaksha tv
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ಗುಡ್ ಬೈ ಹೇಳುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ಕ್ಯಾಪ್ಟನ್ಸಿಯಿಂದ ದೂರ ಉಳಿದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳುವುದಕ್ಕೂ ಮೊದಲು ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಜೊತೆ ಚರ್ಚೆ ನಡೆಸಿದ್ದರಂತೆ.
ರಾಹುಲ್ ದ್ರಾವಿಡ್ ಜೊತೆ ಚರ್ಚೆ ನಡೆಸಿದ ಬಳಿಕ ವಿರಾಟ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಮಾಹಿತಿ ನೀಡಿದ್ದಾರಂತೆ.
ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಆ ಬಳಿಕ ಕೊಹ್ಲಿ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ, ಕೊಹ್ಲಿ ಬದಲಿಗೆ ರೋಹಿತ್ ಶರ್ಮಾಗೆ ಟೆಸ್ಟ್ ಸಾರಥ್ಯವನ್ನು ಹಸ್ತಾಂತರಿಸುತ್ತಾರೋ ಅಥವಾ ಬಿಸಿಸಿಐ ಬೇರೊಬ್ಬ ಸದಸ್ಯನತ್ತ ವಾಲುತ್ತಾರೋ ಎಂಬುದು ಸದ್ಯ ಚರ್ಚೆಯಲ್ಲಿದೆ.
ಜನವರಿ 19 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆರಂಭವಾಗಲಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.









