ಊ ಅಂತಿಯಾ ಮಾಮ ಅಂತ ಪುಷ್ಪ ಹಾಡಿಗೆ ಹೆಜ್ಜೆ ಹಾಕಿದ ವಿರಾಟ್ ಕೊಹ್ಲಿ
ಕಳೆದ ವರ್ಷದ ಪಡ್ಡೆ ಹುಡುಗರ ಹಾಟ್ ಫೇವರೇಟ್ ಹಾಡು ಊ ಅಂತಿಯಾ ಮಾಮಾ ಊ ಹೂ ಅಂತಿಯಾ ಮಾಮ ಹಾಡಿಗೆ ವಿರಾಟ್ ಕೋಹ್ಲಿ ಹೆಜ್ಜೆ ಹಾಕಿದ್ದಾರೆ ಈ ವೀಡಿಯೋ ಇದೀಗ ಸೋಶಿಯಲ್ ಮೀಡಿಯದಲ್ಲಿ ವೈರಲ್ ಆಗುತ್ತಿದೆ.
2022 ರ ಐಪಿಎಲ್ ನಲ್ಲಿ ಬಯೋ-ಬಬಲ್ ಒತ್ತಡದ ನಡುವೆಯೂ ಆಟಗಾರರು ಸಾಕಷ್ಟು ಮೋಜು ಮಾಡುತ್ತಿದ್ದಾರೆ. ಬುಧವಾರ (ಏಪ್ರಿಲ್ 27) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ವಿವಾಹ ಸಮಾರಂಭದಲ್ಲಿ ಸಹ ಆಟಗಾರರು ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.
ವಿರಾಟ್ ಕೊಹ್ಲಿ ಕಪ್ಪು ಬಣ್ಣದ ಕುರ್ತಾ ಪೈಜಾಮ ಧರಿಸಿ ಶಹಬಾಜ್ ಅಹ್ಮದ್ ಮತ್ತು RCB ನಾಯಕ ಫಾಫ್ ಡು ಪ್ಲೆಸಿಸ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ ಶಬಾಜ್ ಅಹಮ್ಮದ್ ಕೋಹ್ಲಿಗೆ ಸ್ಟೆಪ್ ಹೇಳಿಕೊಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ ನಿಂದ ರನ್ ಹರಿದುಬರುತ್ತಿಲ್ಲ. 9 ಪಂದ್ಯಗಳಿಂದ ಕೇವಲ 128 ರನ್ ಗಳಿಸಿದ್ದಾರೆ. ಕಳೆದ ಮೂರು ಇನ್ನಿಂಗ್ಸ್‌ಗಳಲ್ಲಿ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಲವು ಕ್ರಿಕೆಟ್ ತಜ್ಞರು ವಿರಾಟ್ ಕೊಹ್ಲಿಗೆ ಐಪಿಎಲ್ ನಿಂದ ಹಿಂದೆ ಸರಿಯುವಂತೆ ಸಲಹೆ ನೀಡುತ್ತಿದ್ದಾರೆ. ಇದರ ಹೊರತಾಗಿಯೂ ಆರ್‌ಸಿಬಿ ತಂಡದ ಮ್ಯಾನೇಜ್‌ಮೆಂಟ್ ಅವರ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದೆ.








