ಬೆಂಗಳೂರು : ಇದೇ ತಿಂಗಳ 15 ರಂದು ಮೈಸೂರಿನಲ್ಲಿ ವಿಷ್ಣು ವರ್ಧನ್ ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ.
ವಿಷ್ಣು ಸ್ಮಾರಕ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿದ್ದರು.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗುತ್ತಿದೆ. ಈ ತಿಂಗಳ 15ರಂದು ಸ್ಮಾರಕದ ಗುದ್ದಲಿ ಪೂಜೆ ಕಾರ್ಯಕ್ರಮವಿದೆ. ಸೂಕ್ತ ಭದ್ರತೆಗಾಗಿ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಡ್ರಗ್ಸ್ ಮಾಫಿಯಾ ಬಗ್ಗೆ ಅನಿರುದ್ಧ ಮಾತನಾಡಿ, ನಮಗೆ ಡ್ರಗ್ಸ್ ಮಾಫಿಯಾ, ಡ್ರಗ್ಸ್ ಜಾಲದ ಬಗ್ಗೆ ಅರಿವಿಲ್ಲ. ಈ ವಿಚಾರ ಮನಸ್ಸಿಗೆ ತುಂಬಾ ಬೇಜಾರಾಗುತ್ತಿದೆ. ಇಡೀ ಜಗತ್ತಿನಲ್ಲೇ ಈ ಮಾಫಿಯಾ ಇರಬಾರದು. ಯುವ ಪೀಳಿಗೆಯನ್ನ ಇದರಿಂದ ರಕ್ಷಿಸಬೇಕು ಎಂದು ಮನವಿ ಮಾಡಿಕೊಂಡರು.