ದಾವಣಗೆರೆ : ಸಾಹಸಿಂಹ ವಿಷ್ಣುವರ್ಧನ್ ಅಭಿಮಾನಿಯೊಬ್ಬರು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಡಾಂಗೇ ಪಾರ್ಕ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಲೋಕೇಶ್(52) ಎಂದು ಗುರುತಿಸಲಾಗಿದೆ. ಇವರು ದಾವಣಗೆರೆಯ ಕೆಟಿಜೆ ನಗರದ ಡಾಂಗೇ ಪಾರ್ಕ್ ಬಳಿ ಇರುವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಸಾಹಸಸಿಂಹ ವಿಷ್ಣು ಅಭಿಮಾನಿಯಾಗಿದ್ದ ಲೋಕೇಶ್, ನಗರದ ಕೆಎಸ್ಆರ್ಟಿಸಿ ಮುಂಭಾಗ ಬೀಡ ಅಂಗಡಿ ನಡೆಸುತ್ತಿದ್ದರು. ಸಾಲದ ಬಾಧೆ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.