ಕೋಲಾರ : ಹೆಚ್. ವಿಶ್ವನಾಥ್ ಗೆ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ತಪ್ಪಿರೋದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೂ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಲು ಒಲವಿತ್ತು, ಆದ್ರೆ ಹೈ ಕಮಾಂಡ್ ಕೈ ಬಿಟ್ಟಿರುವುದು ಬೇಸರ ತಂದಿದೆ. ಕಾರಣಾಂತರಗಳಿಂದ ವಿಶ್ವನಾಥ್ ಅವರ ಹೆಸರನ್ನ ಕೈ ಬಿಡಲಾಗಿದೆ. ಅವರು ಒಂದು ಪಕ್ಷದ ಅಧ್ಯಕ್ಷರಾಗಿದ್ದವರು, ಅವರ ಆಗಮನ ಬಿಜೆಪಿಗೆ ಆನೆ ಬಲ ಬಂದಂತಾಗಿತ್ತು. ಆದರೆ ಸ್ವಲ್ಪ ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದರು.
ಇನ್ನು ಪಕ್ಷಕ್ಕೆ ದುಡಿದವರನ್ನ ಬಿಟ್ಟು, ಮೂಲ ಬಿಜೆಪಿಗರಿಗೆ ಇಬ್ಬರಿಗೆ ಟಿಕೆಟ್ ನೀಡುವ ಮೂಲಕ ಕಾಂಪ್ರಮೈಸಿಂಗ್ ಫಾರ್ಮುಲಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವರ ಬಳಿ ಮಾತನಾಡಿ ಮನವೊಲಿಸಲು ಪ್ರಯತ್ನ ಮಾಡುವೆ ಎಂದು ನಾಗೇಶ್ ಹೇಳಿದ್ದಾರೆ.