ರಾಜ್ಯದ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸುತ್ತಿದ್ದ ಹಲವು ಪ್ರಕರಣಗಳ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಡಂಗಾಯಿ ನಿವಾಸಿ ಅಹಮ್ಮದ್ ಹನೀಫ್ ಯಾನೆ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ ಎರಡು ಪ್ರಕರಣಗಳು ಸೇರಿದಂತೆ ಗದಗ, ಶಿವಮೊಗ್ಗ, ಬೆಂಗಳೂರು, ಸುಬ್ರಹ್ಮಣ್ಯಪುರಂ, ಚಿಕ್ಕಮಗಳೂರು, ಮೂಡಿಗೆರೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಈತ ಕಳ್ಳತನ, ಹನಿಟ್ಯ್ರಾಫ್, ವಂಚನೆಗಳಲ್ಲಿ ತೊಡಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನು ಈತನ ವಿರುದ್ಧ ಕೆಲ ದಿನಗಳ ಹಿಂದೆ ನ್ಯಾಯಾಲಯ ವಾರೆಂಟ್ ಜಾರಿಮಾಡಿತ್ತು. ಪೊಲೀಸ್ ವರಿಷ್ಠಾಧಿಕಾರಿ ಡಾ.ಲಕ್ಷ್ಮೀ ಪ್ರಸಾದ್, ಡಿವೈಎಸ್‌ಪಿ ವೆಲೆಂಟನ್ ಡಿಸೋಜಾ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾಧಿಕಾರಿ ವಿನೋದ್ ಎಸ್.ಕೆ.ಅವರ ಸೂಚನೆಯಂತೆ ಪೊಲೀಸರಾದ ಪ್ರತಾಪ ರೆಡ್ಡಿ, ಜಯಕುಮಾರ್, ವಿನಾಯಕ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.








