ಬಿಎಸ್ ವೈಗೆ `ಸಂಪುಟ ದರ್ಜೆಯ ಸ್ಥಾನ’ B S Yediyurappa
ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಪಟ್ಟಕ್ಕೇರಿಸಿದ ಬಿಎಸ್ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ದರ್ಜೆಯ ಸ್ಥಾನ ನೀಡಿದ್ದಾರೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದಾರೆ.
ಬಿಎಸ್ ಯಡಿಯೂರಪ್ಪ, ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ, ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶ ಹೊರಡಿಸಲಾಗಿದೆ.









