ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಕರ್ನಾಟಕದಲ್ಲಿ ರಣಕೇಕೆ ಮುಂದುವರೆಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಕರಾಳ ಹಸ್ತ ಚಾಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25 ಸಾವಿರದ ಗಡಿ ದಾಟಿದ್ದು, ಸೋಂಕಿನ ನಿಯಂತ್ರಣ ಹಾಗೂ ಶನಿವಾರದ ಲಾಕ್ ಡೌನ್, ಬೆಡ್ ಗಳ ಕೊರತೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇನ್ನು ಗುತ್ತಿಗೆ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 2000 ವೈದ್ಯರ ಸೇವೆಯನ್ನು ಖಾಯಂಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಮುಖ್ಯವಾಗಿ ಶನಿವಾರದ ಲಾಕ್ ಡೌನ್ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ಕೋವಿಡ್ ಆಸ್ಪತ್ರೆಗಳಿಗೆ ಬಿಎಸ್ ವೈ ಭೇಟಿ
ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಇಂದು ಯಡಿಯೂರಪ್ಪ ಬೆಂಗಳೂರಿನ ಕೊರೊನಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.








