ಚಾಮರಾಜನಗರ: ಜನಪ್ರತಿನಿಧಿಗಳ ವಿರುದ್ಧ ಮುನಿಸಿಕೊಂಡಿರುವ 5 ಗ್ರಾಮಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದಾರೆ.
ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ಹಿಂದೆ ಸರಿದಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿಯೇ ಮತದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರಿದ್ದು, ಕೇವಲ ಇಬ್ಬರು ಮಾತ್ರ ಮತ ಹಾಕಿದ್ದಾರೆ. ನಾವೆಲ್ಲ ಕನಿಷ್ಠ ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದೇವೆ. ಹಲವು ಬಾರಿ ಈ ಕುರಿತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮತದಾನದಿಂದ ದೂರ ಉಳಿದಿದ್ದೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಈ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಮರೀಚಿಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳು ಮನವೊಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.