ರಾಂಚಿ: ಜಾರ್ಖಂಡ್ ನ (Jharkhand) 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು 683 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಇದರೊಂದಿಗೆ ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಮತದಾನ ಶುರುವಾಗಿದೆ. ಜಾರ್ಖಂಡ್ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 5ರ ವರೆಗೆ ಮತದಾನ ನಡೆಯಲಿದೆ.
ಜಾರ್ಖಂಡ್ ನಲ್ಲಿ ಎನ್ ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿ(ಯು), ಎಲ್ ಜೆಪಿ ಮತ್ತು ಎಜೆಎಸ್, ಇಂಡಿಯಾ ಮೈತ್ರಿಕೂಟಗಳ ಜೆಎಂಎಂ, ಕಾಂಗ್ರೆಸ್, ಆರ್ ಜೆಡಿ ಮಧ್ಯೆ ಪೈಪೋಟಿ ಇದೆ. ಮೊದಲ ಹಂತದ ಚುನವಾಣೆಯ ಪಶ್ಚಿಮದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಸೇರಿದಂತೆ ಹಲವಾರು ಘಟಾನುಘಟಿಗಳು ಕಣದಲ್ಲಿದ್ದಾರೆ.
ಜಾರ್ಖಂಡ್ ನಲ್ಲಿ ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ನ.23 ರಂದು ಫಲಿತಾಂಶ ಹೊರಬೀಳಲಿದೆ.