1 ವರ್ಷ ಕಾಯಿರಿ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತೆ : ಕಾರಜೋಳ
ಬಾಗಲಕೋಟೆ : ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತದೆ ಒಂದು ವರ್ಷ ಕಾಯಿರಿ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಪೆಟ್ರೋಲ್ ದರ ಇಳಿಕೆಗೆ ಬೈ ಎಲೆಕ್ಷನ್ ರಿಸಲ್ಟ್ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದರು.
ಕಾಂಗ್ರೆಸ್ ನವರು 70 ವರ್ಷದ ಆಡಳಿತದಲ್ಲಿ ಮಾಡಿರುವ ಸಾಧನೆ ಶೂನ್ಯ. ಅದರಲ್ಲಿಯೂ ವಿಶೇಷವಾಗಿ ಮನಮೋಹನ್ ಸಿಂಗ್ ಸರ್ಕಾರ ಅವಧಿಯಲ್ಲಿ ಏನು ಮಾಡಲು ಸಾಧ್ಯವಾಗಲಿಲ್ಲ.
ಅವರಲ್ಲಿ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಇಲ್ಲಾ. ಇದರಿಂದಾಗಿ ಕಾಂಗ್ರೆಸ್ ನವರು ಪದೇ ಪದೇ ಸುಳ್ಳು ಆರೋಪ ಮಾಡುತ್ತಾರೆ ಎಂದು ಟಾಂಗ್ ನೀಡಿದರು.
ಇನ್ನು ಇದೇ ವೇಳೆ ಮೇಕೆದಾಟುಗಾಗಿ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನೀರುದ್ಯೋಗಿಗಳು ಆದಾಗಲೆಲ್ಲ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಾರೆ.
2012 ರಲ್ಲಿ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮಾಡಿದರು. ಇದೀಗ ಮತ್ತೆ ಕಾಂಗ್ರೆಸ್ ನವರಿಗೆ ಮೇಕೆದಾಟು ಪಾದಯಾತ್ರೆ ನೆನಪಾಗಿದೆ ಎಂದು ವ್ಯಂಗ್ಯವಾಡಿದರು.