ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

Shwetha by Shwetha
July 10, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ 50,000 ರೂಪಾಯಿ ವರೆಗಿನ ಸಾಲವನ್ನು ತಕ್ಷಣವೇ ಮನ್ನಾ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಆರ್ ಅಶೋಕ್, ಇತ್ತೀಚೆಗೆ ನೀವು ಬರಪೀಡಿತ ರೈತರ ಸಾಲಮನ್ನಾ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿಕೆ ನೀಡಿದ್ದೀರಿ. ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರಿಗೆ ಬೇಕಾಗಿರುವುದು ಬರೀ ಭರವಸೆಯ ಪರಿಶೀಲನೆ ಅಲ್ಲ, ಬದಲಿಗೆ ತಕ್ಷಣದ ದೃಢ ನಿರ್ಧಾರ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಬರ ಮತ್ತು ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಎಲ್ಲಾ ರೈತರ 50 ಸಾವಿರ ರೂಪಾಯಿ ವರೆಗಿನ ಸಾಲವನ್ನು ತಕ್ಷಣವೇ ಮನ್ನಾ ಮಾಡುವ ಘೋಷಣೆ ಹೊರಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026

ಇದೇ ವೇಳೆ ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರ ಕೂಡಲೇ ಹತ್ತು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕೆಂದು ಕೈಗೊಂಡಿರುವ ನಿರ್ಣಯವನ್ನು ಆರ್ ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಣಯ ಅತ್ಯಂತ ಬೇಜವಾಬ್ದಾರಿಯುತ ಮತ್ತು ದುರದೃಷ್ಟಕರ ಎಂದು ಅವರು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ರೈತರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರದ ವಿರುದ್ಧ ಇಂತಹ ರಾಜಕೀಯ ಪ್ರೇರಿತ ನಿರ್ಣಯಗಳನ್ನು ಅಂಗೀಕರಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಒಂದೆಡೆ ಹಲವಾರು ಜಿಲ್ಲೆಗಳು ತೀವ್ರ ಬರಗಾಲದಿಂದ ತತ್ತರಿಸುತ್ತಿದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದ ಆತಂಕ ಎದುರಾಗಿದೆ. ಲಕ್ಷಾಂತರ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರದ ತುರ್ತು ನೆರವಿಗಾಗಿ ಕಾದು ಕುಳಿತಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ಕೇವಲ ಕಾಲಹರಣ ಮಾಡದೆ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂದು ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram