ಬೆಂಗಳೂರು: ವಕ್ಫ್ ವಿವಾದ ರಾಜ್ಯದಲ್ಲಿ ತಲೆದೋರಿದ್ದು, ಈಗ ಬಿಜೆಪಿಯ ಹಲವು ನಾಯಕರು ರಾಜ್ಯದಲ್ಲಿ ಅಭಿಯಾನ ನಡೆಸಲು ಮುಂದಾಗಿದ್ದಾರೆ.
ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ ಮಾತನಾಡಿದ್ದಾರೆ.
ಈ ವೇಳೆ ಮಾತನಾಡಿರುವ ಶಾಸಕ ಯತ್ನಾಳ್, ರಾಜ್ಯದಲ್ಲಿ 6 ಲಕ್ಷ ಎಕರೆ ಭೂಮಿಯನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಮುಂದಾಗಿದೆ. ವಕ್ಫ್ ನಿಂದ ದೊಡ್ಡ ಅನ್ಯಾಯವಾಗುತ್ತಿದೆ. ಇದರಿಂದ ನಮ್ಮ ಮಠ ಮಾನ್ಯಗಳಿಗೂ ತೊಂದರೆಯಾಗಿದೆ. ಹೀಗಾಗಿ ವಕ್ಫ್ ಟ್ರಿಬ್ಯುನಲ್ ರದ್ದಾಗಬೇಕು. ವಕ್ಫ್ ಟ್ರಿಬ್ಯುನಲ್ ಒಂದು ಶಾಪ ಆಗಿದೆ ಎಂದು ಗುಡುಗಿದ್ದಾರೆ.
ನಾವು ಅಭಿಯಾನ ಮಾಡಿ ಮಾಹಿತಿ ಪಡೆದು JPCಗೆ ವರದಿ ನೀಡುತ್ತೇವೆ. ಜನಜಾಗೃತಿಗಾಗಿ ಈ ಅಭಿಯಾನ ಮಾಡುತ್ತೇವೆ. ರಾಜ್ಯ, ಕೇಂದ್ರ ಸರ್ಕಾರ ಎರಡಕ್ಕೂ ನಾವು ಈ ಒತ್ತಾಯ ಮಾಡ್ತಿದ್ದೇವೆ. ಜಮೀರ್ ಬಂದು ಭಾಷಣ ಮಾಡ್ತಾರೆ. ಸೌತಾನ್ ಅಂತ ಮಾತಾಡಿ ಪ್ರಚೋದನೆ ಮಾಡ್ತಾರೆ. ಅಧಿಕಾರಿಗಳಿಗೆ ಧಮ್ಕಿ ಹಾಕಿ ನೋಟಿಸ್ ಕೊಡಿ ಎನ್ನುತ್ತಿದ್ದಾರೆ. ಹೀಗಾಗಿ ನಾವು ಅಭಿಯಾನ ನಡೆಸುತ್ತಿವೆ. ವಕ್ಫ್ ನಿಂದ ನೋಟಿಸ್ ಬಂದ ರೈತರು ಸಂಪರ್ಕಿಸಬಹುದು ಎಂದಿದ್ದಾರೆ.