ಬೆಂಗಳೂರು: ವಕ್ಫ್ ಮಂಡಳಿಯಿಂದಾಗಿ ರಾಜ್ಯದಲ್ಲಿ ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು. ಇದು ಸರ್ಕಾರವನ್ನು ಇಕ್ಕಟ್ಟಿಗೂ ಸಿಲುಕಿಸಿತ್ತು. ಹೀಗಾಗಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ, ಬೆಂಗಳೂರು ಇವರು ಈ ಕುರಿತು ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ವಕ್ಫ್ ಮಂಡಳಿ ಆಸ್ತಿ ಕುರಿತು ಸೂಚನೆಗಳನ್ನು ನೀಡಲಾಗಿದೆ. ಮ್ಯುಟೇಷನ್ ಮಾಡಲು ಯಾವುದೇ ಕಚೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮ್ಯುಟೇಷನ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಸೂಚಿಸಲಾಗಿದೆ.
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.