ಅಮೆರಿಕದ ವಾಲ್ಮಾರ್ಟ್ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು…
ಮಂಗಳವಾರ ಅಮೆರಿಕದ ವರ್ಜೀನಿಯಾದ ವಾಲ್ಮಾರ್ಟ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಅಂಗಡಿಯ ಮ್ಯಾನೇಜರ್ ಒಬ್ಬರು ತಮ್ಮ ಸಿಬ್ಬಂದಿಯ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದಾದ ಬಳಿಕ ತಾನೂ ಗುಂಡು ಹಾರಿಸಿಕೊಂಡಿದ್ದಾನೆ.
ನಾವು ವಾಲ್ಮಾರ್ಟ್ನಲ್ಲಿ ದಾಳಿಕೋರನ ಮೃತ ದೇಹವನ್ನು ಕಂಡುಕೊಂಡಿದ್ದೇವೆ. ಒಂದು ವಾರದಲ್ಲಿ ನಡೆಯುತ್ತಿರುವ ಎರಡನೇ ಸಾಮೂಹಿಕ ಗುಂಡಿನ ಘಟನೆ ಇದಾಗಿದೆ. ಇದಕ್ಕೂ ಮುನ್ನ ಕೊಲೊರಾಡೋದ ಸಲಿಂಗಕಾಮಿ ಕ್ಲಬ್ ಒಂದರಲ್ಲಿ ಶೂಟಿಂಗ್ ನಡೆದಿತ್ತು. ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಲಿಯೋ ಕೊಸಿನ್ಸ್ಕಿ ಎಂಬ ಪೊಲೀಸ್ ಅಧಿಕಾರಿ ಹೇಳಿದರು
ರಾತ್ರಿ 10 ಗಂಟೆ ಸುಮಾರಿಗೆ ಗುಂಡಿನ ದಾಳಿಯ ಬಗ್ಗೆ ನಮಗೆ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ತಕ್ಷಣ ಸ್ಥಳಕ್ಕೆ ತಲುಪಿದೆವು. ಹಲವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸತ್ತವರ ಗುರುತು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ. ತನಿಖೆಯ ನಂತರವೇ ಹೇಳಲಾಗುವುದು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಅವರನ್ನು ವಿಚಾರಣೆ ಮಾಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
Walmart Shooting: Shooting attack in American Walmart: 10 people died…