ವಿದ್ಯಾರ್ಥಿಗಳಿಗೆ ಉಚಿತ ವಿದ್ಯುತ್ ನೀಡುವುದಕ್ಕಾಗಿ ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ ಜಾರಿಗೊಳಿಸಲಾಗಿದೆ.
ರಾಜ್ಯದ ನಿವಾಸಿಯಾಗಿರುವ ವಿದ್ಯಾರ್ಥಿಗಳು, ಯಾವುದೇ ವರ್ಗ ಅಥವಾ ಯಾವುದೇ ಹಿಂದುಳಿದ ವರ್ಗದವರಾಗಿರಬಹುದು. ವಿದ್ಯಾರ್ಥಿಯು 12 ನೇ ತರಗತಿ ಅಥವಾ ದ್ವಿತೀಯ ಪಿಯುಸಿಯನ್ನು ಉತ್ತಮ ಶ್ರೇಣಿಗಳೊಂದಿಗೆ ಉತ್ತೀರ್ಣರಾಗಿರಬೇಕು. ನಿವಾಸ ಪ್ರಮಾಣಪತ್ರ, ಗುರುತಿನ ಚೀಟಿಗಾಗಿ ಆಧಾರ್ ಕಾರ್ಡ್, ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆ ಮಾಹಿತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಶೈಕ್ಷಣಿಕ ಪ್ರಮಾಣಪತ್ರದಂತಹ ದಾಖಲೆ ಸಲ್ಲಿಸಬೇಕು.
ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿ ಜೊತೆಗೆ, ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನವಾಗಿದೆ. ಅರ್ಜಿದಾರರು ಕಾರ್ಮಿಕ ಅಧಿಕಾರಿ ಕಚೇರಿ, ಉಪ ವಿಭಾಗ-1, ಬೆಂಗಳೂರು. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಕಟ್ಟಡ, ಮೊದಲ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ವಿಳಾಸವನ್ನು ಸಂಪರ್ಕಿಸಬಹುದು.