ಡಿಕೆ. ಶಿವಕುಮಾರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ಮತ್ತಷ್ಟು ತೀವ್ರಗೊಂಡಿದೆ.
ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್. ಡಿ. ಕುಮಾರ್ ಸ್ವಾಮಿ ಅವರನ್ನು ಉದ್ದೇಶಿಸಿ, ಬರೀ 17 ಸೀಟುಗಳನ್ನು ಇಟ್ಟುಕೊಂಡು ಹರಿತೀನಿ, ಹರಿತೀನಿ ಅಂದ್ರೆ ಏನೂ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಈ ಹೇಳಿಕೆಗೆ ತಿರುಗೇಟು ನೀಡಿರುವ ನಿಖಿಲ್ ಕುಮಾರಸ್ವಾಮಿ, ಡಿಕೆ ಅಣ್ಣ, ನಿಮ್ಮ ಹಿಂದೆ 136 ಶಾಸಕರ ಭಾರೀ ಬಹುಮತ ಇದೆ. ಈ ಮೂರು ವರ್ಷಗಳಲ್ಲಿ ನೀವು ಏನು ಸಾಧನೆ ಮಾಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಜನರು ಸರ್ಕಾರದ ಕಾರ್ಯವೈಖರಿಯನ್ನು ನೋಡುತ್ತಿದ್ದಾರೆ ಎಂದು ಹೇಳಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೆಚ್ಚುತ್ತಿದೆ ಎಂದು ಆರೋಪಿಸಿದರು.
JDS ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಈ ಟಾಕ್ ವಾರ್ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಆರೋಪ-ಪ್ರತ್ಯಾರೋಪಗಳು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.








