ಯುದ್ಧದ ಸಮಯ, ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ : ಸುಧಾಕರ್ Sudhakar
ಬೆಂಗಳೂರು : ಇದು ಯುದ್ಧದ ಸಮಯ, ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೊರೊನಾ ಹೆಚ್ಚಳ ಹಿನ್ನೆಲೆ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಕೋವಿಡ್ ವಿಚಾರದಲ್ಲಿ ನಾವು ಪ್ರತಿಷ್ಠೆಗೆ ಹೋಗಲ್ಲ. ಸಮರೋಪಾದಿಯಲ್ಲಿ ಕೆಲಸಗಳು ನಡೆಯುತ್ತಿದೆ.
ಜನರ ಜೀವ ಉಳಿಸುವ ಕಡೆ ಹೆಚ್ಚು ಗಮನ ಹರಿಸುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಕೆಲಸ ಮಾಡುತ್ತೇವೆ. ವಿಪಕ್ಷಗಳ ಸಲಹೆ ಪಡೆದುಕೊಳ್ಳಲು ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.
ಇನ್ನು ಇದೇ ವೇಳೆ ಲಾಕ್ ಡೌನ್ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರು ಕೋವಿಡ್ ನಿಯಮ ಪಾಲಿಸಿದರೇ ಲಾಕ್ ಡೌನ್ ಸೀಲ್ ಡೌನ್ ಅವಶ್ಯಕತೆಇಲ್ಲ ಎಂದು ಹೇಳಿದರು. ಇನ್ನು ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮಗಳ ಅನಿವಾರ್ಯತೆ ಇದೆ ಎಂದರು.










