ಬೆಂಗಳೂರು: ಇಲ್ಲಿನ ಭೈರತಿ ಹತ್ತಿರ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. 8ಕ್ಕೂ ಅಧಿಕ ಅಗ್ನಿಶಾಮಕ ವಾಹನ ಹಾಗೂ 20ಕ್ಕೂ ಅಧಿಕ ಸಿಬ್ಬಿಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್ಗಳಿಗೆ ಸಾಗಿಸುವ ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು.