ಬೆಂಗಳೂರು: ಉತ್ತರ ಕರ್ನಾಟಕ(North Karnataka) ಭಾಗದಲ್ಲಿ ಜೂನ್ 22ರಿಂದ 24ರ ವರೆಗೆ ಭಾರೀ ಮಳೆಯಾಗುವ (rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ 22ರಿಂದ 24ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 20ರಂದು ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದೆ. ಏಕಾಏಕಿ ಆರಂಭವಾದ ಮಳೆಗೆ ಜನಜೀವನ ಅಸ್ತವ್ಯಸ್ತ ಆಗಿದೆ. ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದ್ದು, ಉತ್ತಮವಾಗಿ ಮಳೆಯಾಗಿದೆ. ಜೂನ್ 23 ರಿಂದ ರಾಜ್ಯಾದ್ಯಂತ ಮಳೆ ಚುರುಕುಗೊಳ್ಳಲಿದೆ. ಹೀಗಾಗಿ ರಾಜ್ಯಾದ್ಯಂತ ಮತ್ತೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.