Wasim Jaffer : ಟೀಂ ಇಂಡಿಯಾ ಕ್ಯಾಪ್ಟನ್ಸಿಗೆ ಹಾರ್ದಿಕ್ ಸೂಕ್ತ ಆಟಗಾರ
ರೋಹಿತ್ ಶರ್ಮಾ ತಂಡಕ್ಕೆ ಲಭ್ಯರಿಲ್ಲದಿದ್ದರೆ ಹಾರ್ದಿಕ್ ಪಾಂಡ್ಯ ನಾಯಕರಾಗಲು ಸೂಕ್ತ ಆಟಗಾರ ಎಂದು ಟೀಂ ಇಂಡಿಯಾ ಮಾಜಿ ಬ್ಯಾಟ್ಸ್ಮನ್ ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷ ಐಪಿಎಲ್ನೊಂದಿಗೆ ಪುನರಾಗಮನ ಮಾಡಿದ ಹಾರ್ದಿಕ್ ಪಾಂಡ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ಹಾರ್ದಿಕ್ ನಾಯಕನಾಗಿ ಗುಜರಾತ್ ಟೈಟಾನ್ಸ್ ತಂಡವನ್ನು ಮೊದಲ ಪ್ರಯತ್ನದಲ್ಲಿ ಚಾಂಪಿಯನ್ ಮಾಡಿದ್ದಾರೆ.
ಅದೇ ರೀತಿ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ ಮಿಂಚಿದ್ದರು.
ಈ ಹಿನ್ನಲೆಯಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡೆ ಹೆಗಲೇರಿದೆ.
ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ವಾಸೀಂ ಜಾಫರ್ ಹಾರ್ದಿಕ್ ಪಾಂಡ್ಯ ಬಗ್ಗೆ ಮಾತನಾಡಿದ್ದು, ಟೀಂ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಸೂಕ್ತ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ.
ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಸಾಮರ್ಥ್ಯ ಹಾರ್ದಿಕ್ ಗೆ ಇದೆ.
ರೋಹಿತ್ ಶರ್ಮಾ ಗೈರಿನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ಸೂಕ್ತ ವ್ಯಕ್ತಿ.
ಐಪಿಎಲ್ ನಲ್ಲಿ ಕ್ಯಾಪ್ಟನ್ ಆಗಿ ತಮ್ಮ ತಂಡವನ್ನು ಹಾರ್ದಿಕ್ ಪಾಂಡ್ಯ ಅದ್ಭುತವಾಗಿ ಮುನ್ನಡೆಸಿದ್ದರು.
ಅದೇ ರೀತಿ ವ್ಯಕ್ತಿಗತವಾಗಿ ಹಾರ್ದಿಕ್ ಉತ್ತಮ ಪ್ರದರ್ಶನ ನೀಡಿದರು.
ರೋಹಿತ್ ಶರ್ಮಾ ನಾಯಕರಾಗಿದ್ದಾಗ ಹಾರ್ದಿಕ್ ಪಾಂಡ್ಯ ವೈಸ್ ಕ್ಯಾಪ್ಟನ್ ಆಗಿರಬೇಕು ಎಂದು ನಾನು ಕೋರಿಕೊಳ್ಳುತ್ತೇನೆ ಎಂದಿದ್ದಾರೆ.