ಎಂಇಎಸ್ ಸಂಘಟನೆ ನಿಷೇಧಿಸುವಂತೆ ವಾಟಾಳ್ ನಾಗರಾಜ್ ಪ್ರತಿಭಟನೆ Watal Nagaraj saaksha tv
ಬೆಳಗಾವಿ : ರಾಜ್ಯ ದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಿ, ಎಂಇಎಸ್ ಸಂಘಟನೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಅಲ್ಲದೇ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಇನ್ನು ಪ್ರತಿಭಟನೆ ಸಂದರ್ಭದಲ್ಲಿ ರಾಷ್ಟ್ರೀಯ ಕವಿ ಕುವೆಂಪು ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡಲಾಯಿತು.
ಬಳಿಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರವೇ ಶಿವಸೇನೆ ಗೌಡ, ಕನ್ನಡ ಸೇನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.