ಕೆಆರ್ ಎಸ್ ಡ್ಯಾಂನಿಂದ ವಿಸಿ ನಾಲೆಗೆ ನೀರು : ರೈತರಿಗೆ ಸಂತಸ KRS Dam
ಮಂಡ್ಯ : ರೈತರ ಪ್ರತಿಭಟನೆಗೆ ಮಣಿದು ಕೆಆರ್ ಎಸ್ ಡ್ಯಾಂನಿಂದ ವಿಸಿ ನಾಲೆಗೆ ನೀರು ಹರಿಸಲಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ನೀರಾವರಿ ಅಧಿಕಾರಿಗಳು ಕೆಆರ್ ಎಸ್ ತುಂಬುವ ಮೊದಲೇ ಡ್ಯಾಂ ತುಂಬುವ ಮೊದಲೇ ತಮಿಳುನಾಡಿನಗೆ ನೀರು ಬಿಟ್ಟಿದ್ದರು.
ಇದರಿಂದ ಆಕ್ರೋಶಗೊಂಡಿದ್ದ ರೈತರು, ಮೊದಲು ವಿಸಿ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ರೈತ ಸಂಘಟನೆಯಿಂದ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು.
ಇದೀಗ ರೈತರ ಪ್ರತಿಭಟನೆಗೆ ಮಣಿದ ಸರ್ಕಾರ ಹಾಗೂ ನೀರಾವರಿ ಅಧಿಕಾರಿಗಳು ಇಂದಿನಿಂದ ವಿಶ್ವೇಶ್ವರಯ್ಯ ನಾಲೆಗೆ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ.
ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.