ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನೀರಿಗಾಗಿ ಹಾಹಾಕಾರ Chitradurga
ಚಿತ್ರದುರ್ಗ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನೀರಿನ ಅಭಾವ ಎದುರಾಗಿದೆ. ಆಸ್ಪತ್ರೆಯಲ್ಲಿ ಕುಡಿಯಲು ಹಾಗೂ ಶೌಚಾಲಯಗಳಿಗೂ ಬಳಸಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದ್ರಿಂದ ಸೋಂಕಿತರು ಪರದಾಡುವಂತಾಗಿದೆ.
ಆಸ್ಪತ್ರೆಯಲ್ಲಿ ಸೋಂಕಿತರು ನೀರು ನೀರು ಎಂದು ಕೂಗಿ ಕೇಳಿದರೆ ಮಾತ್ರ ನೀರು ಸಿಬ್ಬಂದಿ ನೀರು ಕೊಡುತ್ತಿದ್ದಾರೆ.
ಇದು ಒಂದು ಕಡೆಯಾದರೆ ನೀರಿನ ಅಭಾವದಿಂದಾಗಿ ವಾರ್ಡ್ ಗಳಲ್ಲಿ ಸ್ವಚ್ಛತೆ ಕಣ್ಮರೆಯಾಗಿದೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಸೋಂಕಿತರು ದೂರುತ್ತಿದ್ದಾರೆ..










