ಚಿತ್ರದುರ್ಗದ ಧರ್ಮಪುರ ಹೋಬಳಿಯಲ್ಲಿ ನೀರಿಗಾಗಿ ಹಾಹಾಕಾರ Chitradurga
ಚಿತ್ರದುರ್ಗ : ಜಿಲ್ಲೆ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ.
ಕೋಡಿಹಳ್ಳಿ ಗೊಲ್ಲರಹಟ್ಟಿ , ಲಂಬಾಣಿ ತಾಂಡ, ಜೆ. ಜೆ ಕಾಲೋನಿ ಯಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಇದರಿಂದ ಜನರು ಕಂಗಾಲಾಗಿದ್ದಾರೆ.
ಈ ಭಾಗದಲ್ಲಿನ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲದ ಕಾರಣ ಕಿಲೋ ಮೀಟರ್ ಗಟ್ಟಲೇ ನಡೆದುಕೊಂಡು ಹೋಗಿ ಹೊಂಡಗಳಿಂದ ನೀರು ತರುತ್ತಿದ್ದಾರೆ.
ಈ ಸಮಸ್ಯೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಆದ್ರೆ ಯಾರೋಬ್ಬರು ಈ ಬಗ್ಗೆ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಗಳ ಜನರು ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಶಾಸಕರಿಗೆ ಮನವಿ ಮಾಡಿದ್ದಾರೆ.









