ಯಾದಗಿರಿ : ಭಾರಿ ಮಳೆ ಹಿನ್ನೆಲೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ತಡರಾತ್ರಿ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ (Krishna river ) 2.17 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ (Krishna river ) ಬೃಹತ್ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ.
ಇದನ್ನೂ ಓದಿ : ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದರು ಕಳೆದ ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದೆ.
ಈ ಹಿನ್ನೆಲೆ ನಾರಾಯಣಪುರದ ಬಸವಸಾಗರ ಜಲಾಶಯ ಕೂಡ ಭರ್ತಿಯಾಗಿದ್ದು ಹೆಚ್ಚಿನ ನೀರು ಕೃಷ್ಣ ನದಿಗೆ ಹರಿಬಿಡಲಾಗಿದೆ.
ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿಪಾತ್ರದ ಗ್ರಾಮಗಳಾದ ತಿಂಥಣಿ ಶೆಳ್ಳಗಿ, ಮುಷ್ಠಳ್ಳಿ, ಸೂಗುರು, ಹೆಮ್ಮಡಗಿ ಸೇರಿದಂತೆ ಅನೇಕ ಗ್ರಾಮಗಳಲ್ಲಿನ ಜನರು ನದಿ ಕಡೆಗೆ ಹೋಗದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ : ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









