ಹಾಸನ : ಹಾರಂಗಿ ಜಲಾಶಯದಿಂದ ಜು.31 ರಿಂದ ನಾಲೆಗಳಿಗೆ ನೀರು ಬಿಡಲಾಗುತ್ತಿದ್ದು, ನೀರು ಬಿಡುಗಡೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮುಡಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರು ಭಾಗದ ಕೆರೆಗಳ ಭರ್ತಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಿಡಲಾಗುತ್ತಿದೆ. ಈ ಬಗ್ಗೆ ಆಹಾರ ನಾಗರಿಕ ಸರಬರಾಜು ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರೈತರು ಈ ನೀರನ್ನು ಕೃಷಿ ಚಟುವಟಿಕೆಗಳಿಗಾಗಿ ಸದುಪಯೋಗ ಪಡೆಸಿಕೊಳ್ಳುವಂತೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.
ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ
ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿಯೇ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ...