WCD Davanagere Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 243 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ತಾಲೂಕು ಕಾರ್ಯಕರ್ತೆ ಸಹಾಯಕಿ
ದಾವಣಗೆರೆ 5 98
ಹರಿಹರ 5 44
ಹೊನ್ನಾಳಿ 2 26
ಹೊನ್ನಾಳಿ 3 8
ಜಗಳೂರು 15 37
ಕರ್ತವ್ಯ ಸ್ಥಳ : ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025
Website : https://karnemakaone.kar.nic.in/abcd/ApplicationForm_JA_org.aspx