WCD Mysuru Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮೈಸೂರು ಜಿಲ್ಲೆಯ ಬಿಳಿಗೆರೆ, ಹೆಚ್.ಡಿ.ಕೋಟೆ, ಹುಣಸೂರು, ಕೃಷ್ಣರಾಜನಗರ, ಮೈಸೂರು ಗ್ರಾಮೀಣ, ಮೈಸೂರು ನಗರ, ನಂಜನಗೂಡು, ಪಿರಿಯಾಪಟ್ಟಣ, ಟಿ.ನರಸೀಪುರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 319 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಸ್ಥಳ ಕಾರ್ಯಕರ್ತೆ ಸಹಾಯಕಿ
ಬಿಳಿಗೆರೆ 6 32
ಹೆಚ್.ಡಿ. ಕೋಟೆ 22 29
ಹುಣಸೂರು 5 26
ಕೃಷ್ಣರಾಜನಗರ 4 22
ಮೈಸೂರು ಗ್ರಾಮೀಣ 6 12
ಮೈಸೂರು ನಗರ 1 14
ನಂಜನಗೂಡು 10 31
ಪಿರಿಯಾಪಟ್ಟಣ 11 57
ಟಿ.ನರಸೀಪುರ 3 28
ಕರ್ತವ್ಯ ಸ್ಥಳ : ಮೈಸೂರು ಜಿಲ್ಲೆಯ ಬಿಳಿಗೆರೆ, ಹೆಚ್.ಡಿ.ಕೋಟೆ, ಹುಣಸೂರು, ಕೃಷ್ಣರಾಜನಗರ, ಮೈಸೂರು ಗ್ರಾಮೀಣ, ಮೈಸೂರು ನಗರ, ನಂಜನಗೂಡು, ಪಿರಿಯಾಪಟ್ಟಣ, ಟಿ.ನರಸೀಪುರ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 16, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 15, 2025








