ನಾವು ಬಿಜೆಪಿಯವರು ಸಭ್ಯಸ್ಥರು : ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು : ನಾವು ಬಿಜೆಪಿಯವರು ಸಭ್ಯಸ್ಥರು, ಕಾಂಗ್ರೆಸ್‍ನವರೆ ಗಲಾಟೆ ಮಾಡಿದ್ದು ಎಂದು ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಬಗ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಗೂಂಡಾ ವರ್ತನೆ ನಡೆದಿತ್ತು. ಕಾಂಗ್ರೆಸ್ ಆಡಳಿತ ಮಾಡಿದ್ದ ಕಡೆ ಗೂಂಡಾರಾಜ್ ಇತ್ತು. ಹೀಗಾಗಿ ಕಾಂಗ್ರೆಸ್ ಎಲ್ಲ ಕಡೆ ಅಡ್ರೆಸ್ ಕಳೆದುಕೊಳ್ಳುತ್ತಿದೆ.
ರಾಜ್ಯದ ಜನರೂ ಕೂಡ ಕಾಂಗ್ರೆಸ್ ಗೆ ಛೀಮಾರಿ ಹಾಕ್ತಿದ್ದಾರೆ. ನಿನ್ನೆ ನಡೆದ ಘಟನೆಗೆ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಸಭಾಪತಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು.
ಸಭಾಪತಿ ಬರುವುದಿಲ್ಲ ಎಂದು ಉಪಸಭಾಪತಿ ಕೂತಿದ್ದರು. ಕಾಂಗ್ರೆಸ್‍ನವರು ಉಪಸಭಾಪತಿ ಮೇಲೆ ಹಲ್ಲೆ ಮಾಡಿದ್ದರು. ಉಪಸಭಾಪತಿ ರಕ್ಷಣೆಗಾಗಿ ಬಿಜೆಪಿ ಹೋಗಿದೆ.
ಇದನ್ನೂ ಓದಿ : ರಜಿನಿಕಾಂತ್ ಜೊತೆ ರಾಜಕೀಯ ಮೈತ್ರಿ : ಕಮಲ್ ಹಾಸನ್ ಸ್ಪಷ್ಟನೆ
ನಾವು ಬಿಜೆಪಿಯವರು ಸಭ್ಯಸ್ಥರು, ಕಾಂಗ್ರೆಸ್‍ನವರೆ ಗಲಾಟೆ ಮಾಡಿದ್ದು ಎಂದು ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ, ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್. ಕೋಡಿಹಳ್ಳಿಗೂ ಸಾರಿಗೆ ನೌಕರರಿಗೂ ಏನು ಸಂಬಂಧ, ನೀನು ಎಷ್ಟು ವರ್ಷ ಆಯ್ತು ಉಳುಮೆ ಮಾಡಿ ಎಂದು ಪ್ರಶ್ನಿಸಿದರು.
ಇನ್ನು ಹಳ್ಳಿ ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ಐಷಾರಾಮಿ ಬಂಗಲೆ, ಐಷಾರಾಮಿ ಕಾರಿನಲ್ಲಿ ಓಡಾಡುತ್ತಾರೆ. ನನ್ನ ವೈಯಕ್ತಿಕ ವಿಚಾರ ಮಾತನಾಡಲು ನೀನ್ಯಾರು?, ಬಿಟ್ಟಿ ಹೋರಾಟ, ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಾರೆ.
ಕೋಡಿಹಳ್ಳಿ. ಎಷ್ಟು ಅಕ್ರಮ ಆಸ್ತಿ ಮಾಡಿದ್ದಿಯಾ? ಎಂದು ಕೋಡಿಹಳ್ಳಿ ವಿರುದ್ಧ ಗರಂ ಆದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel