ನಮಗೂ ಸಿ.ಬಿ.ಎಸ್.ಇಗೂ ಸಂಬಂಧವಿಲ್ಲ – ಸುರೇಶ್ ಕುಮಾರ್
ಬೆಂಗಳೂರು, ಜೂನ್ 26: ಗುರುವಾರ, ಸಿ.ಬಿ.ಎಸ್.ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್. ಎಸ್.ಎಲ್.ಸಿ ಪರೀಕ್ಷೆಗಳೂ ರದ್ದಾಗಲಿವೆಯೇ ಎಂಬ ಚರ್ಚೆಗಳು ನಡೆಯುತ್ತಿರುವ ಕಾರಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಕುರಿತು ಮಾತನಾಡಿದ್ದು, ಸಿ.ಬಿ.ಎಸ್.ಇಗೂ ನಮಗೂ ಸಂಬಂಧವಿಲ್ಲ. ನಾವು ಪರೀಕ್ಷೆಯನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ. ನಮಗೆ ಈಗಾಗಲೇ ಸುಪ್ರೀಂಕೋರ್ಟ್ ಪರೀಕ್ಷೆಯನ್ನು ನಡೆಸಲು ಅನುಮತಿ ಕೊಟ್ಟಿದ್ದು, ನಾವಂತೂ ಪರೀಕ್ಷೆ ನಡೆಸಲಿದ್ದೇವೆ ಎಂದು ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಸಿ.ಬಿ.ಎಸ್.ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡಿಸಲು ಉದ್ದೇಶಿಸಿದ್ದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದು, ಕಳೆದ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ರಿಸಲ್ಟ್ ನೀಡುವುದಾಗಿ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ.