ತುಮಕೂರು: ನಾವು ಮನರಂಜನೆ ನೀಡುವ ವ್ಯಕ್ತಿಗಳಲ್ಲ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಹಾಗೂ ಕಾಂಗ್ರೆಸ್‍ನವರೂ ಕಾರಣ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಡಿಸಿಎಂ ಪರಮೇಶ್ವರ್ ಪರೋಕ್ಷವಾಗಿಯೇ ಟಾಂಗ್ ನೀಡಿದ್ದಾರೆ.

ತುಮಕೂರು ತಾಲ್ಲೂಕು ಹೆಗ್ಗೆರೆಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಅವರು, ಗುಬ್ಬ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ. ನಮ್ಮ ಹೈಕಮಾಂಡ್ ಇದರ ಬಗ್ಗೆ ನಿರ್ಧರಿಸಲಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯವುದೇ ಚರ್ಚೆ ನಡೆದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಬಿಜೆಪಿ ಮತ್ತು ಜೆಡಿಎಸ್ ವಿಲೀನದ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ಜೆಡಿಎಸ್ ಮುಖಂಡರು ಹೇಳಬೇಕು. ನಾವು ಮಾತನಾಡುವಾಗ ಸಂಯಮ ಎಚ್ಚರಿಕೆಯಿಂದ ಮಾತನಾಡಬೇಕು. ನಾವು ಮನರಂಜನೆ ನೀಡುವ ವ್ಯಕ್ತಿಗಳಲ್ಲ ಎನ್ನುವ ಮೂಲಕ ಸಿದ್ದರಾಮಯ್ಯಗೆ ಡಿಚ್ಚಿ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆ ಸೋಲಿನ ಕುರಿತು ಸಿದ್ದರಾಮಯ್ಯ ಲೋಕಾಭಿರಾಮವಾಗಿ ಮಾತನಾಡುವುದನ್ನೇ ರಾಜ್ಯದ ರಾಜಕೀಯ ಚರ್ಚೆಯಂತೆ ಬಿಂಬಿಸಲು ಹೊರಟಿರುವುದು ಸರಿಯಲ್ಲ. ಒಬ್ಬ ಅಭ್ಯರ್ಥಿಯನ್ನು ಯಾರೋ ಒಬ್ಬರು ಸೋಲಿಸಲು ಗೆಲ್ಲಿಸಲು ಸಾಧ್ಯವಿಲ್ಲ. ನಾನು 2013ರಲ್ಲಿ ಚುನಾವಣೆಯಲ್ಲಿ ಸೋತ ವಿಷಯವನ್ನು ನಾನು ಮತ್ತೆ ಗೆದ್ದು ಶಾಸಕರಾದರೂ ಬಿಟ್ಟಿಲ್ಲ. ಇದರಲ್ಲಿ ರಾಜಕೀಯ ಹೊರತಾಗಿ ಮತ್ತೇನೂ ಇಲ್ಲ ಎಂದು ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








