ಕೊರೊನಾ ವಿರುದ್ಧ ಹೋರಾಟಕ್ಕೆ ನಾವು ಸಿದ್ಧ : ಜಯಕರ್ನಾಟಕ ಜನಪರ ವೇದಿಕೆ

1 min read
jayakarnataka janapara vedike saakshatv

ಕೊರೊನಾ ವಿರುದ್ಧ ಹೋರಾಟಕ್ಕೆ ನಾವು ಸಿದ್ಧ : ಜಯಕರ್ನಾಟಕ ಜನಪರ ವೇದಿಕೆ

ಯಾದಗಿರಿ : ಜಿಲ್ಲೆಯಲ್ಲಿ ಕಡ್ಡಾಯವಾಗಿ ಎಲ್ಲರಿಗೂ ಕೊರೊನಾ ಲಸಿಕೆ ಸಿಗುವಂತೆ ಮಾಡಿ ಎಂದು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಜಿಲ್ಲೆಯ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಸದಸ್ಯರು ಯೋಧರಂತೆ ನಿಮ್ಮ ಜೊತೆ ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಗುಣರಂಜನ್ ಶೆಟ್ಟಿ ರವರ ನೇತೃತ್ವದಲ್ಲಿ, ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಆರ್.ಚಂದ್ರಪ್ಪ ಅವರು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಅಣ್ಣಪ್ಪ ಓಲೇಕಾರ ರವರು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಶ್ರೀ ತೇಜರಾಜ್ ರಾಥೋಡ್ ರವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲೆಯಲ್ಲಿರುವ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ.

jayakarnataka janapara vedike saakshatv

ಕೊರೊನಾ ಮೂರನೇ ಅಲೆ ಎದುರಿಸಲು ಮುನ್ನೆಚ್ಚಕಾ ಕ್ರಮ ಮತ್ತು ಲಸಿಕೆ ಕೊರತೆ ಬಾರದಂತೆ ನೋಡಿಕೊಳ್ಳುವುದು ಸೇರಿದಂತೆ ಕೊರೊನಾವನ್ನು ರಾಜ್ಯದಿಂದ ತೊಲಗಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಜಯಕರ್ನಾಟಕ ಜನಪರ ವೇದಿಕೆ ಮನವಿ ಮಾಡಿದೆ. ಇದಕ್ಕಾಗಿ ಶಾಸಕರೊಂದಿಗೆ ಸದಾ ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಎಲ್ಲಾ ಸದಸ್ಯರು ಸಹ ಯೋಧರಂತೆ ನಿರಂತರವಾಗಿ ನಿಮ್ಮ ಜೊತೆ ಪ್ರಾಮಾಣಿಕವಾಗಿ ಕೈ ಜೋಡಿಸಿ ಕೊರೋನಾ ಎಂಬ ಮಹಾಮಾರಿಯನ್ನು ರಾಜ್ಯದಿಂದ ತೊಲಗಿಸಿ ಕೊರೋನ ಮುಕ್ತ ರಾಜ್ಯವನ್ನಾಗಿ ಮಾಡಲು ಸದಾ ನಿಮ್ಮೊಂದಿಗೆ ಇರುತ್ತೇವೆ ಎಂದು ತಿಳಿಸಿದೆ.

ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ವೆಂಕಟೇಶ್ ರೆಡ್ಡಿ, ಹಾಗೂ ಯಾದಗಿರಿ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd