ಸಿಎಂ ಹೇಳಿಕೆ ಬಗ್ಗೆ ನಾನು ಮಾತಾಡಲ್ಲ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ Belgaum
ಬೆಳಗಾವಿ : ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೇ ನಾನು ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಠಿ ಮಾಡಿದೆ.
ಅದರಲ್ಲೂ ರಾಜ್ಯದಲ್ಲಿ ಸಿಎಂ ಅವರ ಹೇಳಿಕೆ ನಾನಾ ಊಹಾಪೋಹಗಳಿಗೆ ಹಾಗೂ ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ.
ಈ ಮಧ್ಯೆ ಸಿಎಂ ಹೇಳಿಕೆ ಬಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ ಎಸ್ ಯಡಿಯೂರಪ್ಪ ಪ್ರವಾಹ, ಕೋವಿಡ್ ಸಮರ್ಥವಾಗಿ ನಿರ್ವಹಣೆ ಮಾಡಿದ್ದಾರೆ.
ಪ್ರವಾಹ ಬಂದಾಗ ಸಿಎಂ ಎಲ್ಲಾ ಕಡೆ ತಿರುಗಾಡಿ ನ್ಯಾಯ ಒದಗಿಸಿದ್ದಾರೆ. ಒಳ್ಳೆಯ ಕಾರ್ಯವನ್ನು ಸಿಎಂ ಮಾಡಿದ್ದಾರೆ.
ಆದ್ರೆ ನಿನ್ನೆ ಸಿಎಂ ನೀಡಿದ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ.
ಊಹಾಪೋಹಗಳು ಬರ್ತಾ ಇರ್ವಾವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಹೇಳಿದರು.









