ಬೆಂಗಳೂರು: ನಾವು ಗ್ಯಾರಂಟಿ ಯೋಜನೆಯಿಂದ ಗೆದ್ದಿದ್ದೇವೆ. 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರದ ಆರೋಪ ಮಾಡಿದ್ದರು. ಅದರ ಆಧಾರದ ಮೇಲೆ ನಾವು 40% ಕಮಿಷನ್ ಆರೋಪ ಮಾಡಿದ್ದೇವೆ.
ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಈ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುವುದು ಸುಳ್ಳು ಎಂದಿದ್ದಾರೆ.
ವಕ್ಫ್ (Waqf Property Dispute) ವಿಷಯವನ್ನು ಬಿಜೆಪಿಯವರು (BJP) ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನಾದರು ಮಾಡಬಹುದು. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.