ನಮಗೆ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ : ಹೆಚ್ ಡಿಕೆ H D Kumaraswamy saaksha tv
ಹುಬ್ಬಳ್ಳಿ : ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ,ನಮಗೆ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತ್ತಿದ್ದೆ ಎಂದು ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ನಮಗೆ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ, ನಮಗೆ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತ್ತಿದ್ದೆ ಎಂದು ಪ್ರಶ್ನಿಸಿದರು.
ಇನ್ನು ಸಿದ್ದರಾಮಯ್ಯ ಅವರಿಗೆ ಅದನ್ನು ಬಿಟ್ಟು ಬೇರೆ ಏನು ಹೇಳಲಿಕ್ಕೆ ಸಾಧ್ಯ ಎಂದ ಹೆಚ್ ಡಿಕೆ, ಬಿಜೆಪಿ ಜೊತೆ 5 ವರ್ಷ ಸರ್ಕಾರ ಮಾಡಿದ್ದೆ, 2006ರಲ್ಲಿ ಸರ್ಕಾರ ಮಾಡಲು ಇದೇ ಸಿದ್ದರಾಮಯ್ಯ ಕಾರಣ ಎಂದು ಖಾರವಾಗಿ ಮಾತನಾಡಿದರು.
ಇದೇ ವೇಳೆ ಸಿಂಧಗಿ ಬೈ ಎಲೆಕ್ಷನ್ ಬಗ್ಗೆ ಮಾತನಾಡಿ, ಕ್ಷೇತ್ರದಲ್ಲಿ ಕಳೆದ 5 ದಿನಗಳಿಂದ ಪ್ರಚಾರ ನಡೆಸುತ್ತಿದ್ದೇನೆ. ಈ ಬಾರಿ ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.