CM Bommai: ಆಜಾನ್ ವಿಚಾರವಾಗಿ ಕೋರ್ಟ್ ನೀಡಿದ ಆದೇಶವನ್ನು ಪಾಲಿಸುತ್ತೇವೆ : ಸಿಎಂ ಬೊಮ್ಮಾಯಿ

1 min read
CM Bommai Saaksha Tv

ಆಜಾನ್ ವಿಚಾರವಾಗಿ ಕೋರ್ಟ್ ನೀಡಿದ ಆದೇಶವನ್ನು ಪಾಲಿಸುತ್ತೇವೆ : ಸಿಎಂ ಬೊಮ್ಮಾಯಿ

ಕಲಬುರಗಿ : ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದ್ದು, ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಆ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಂಬಂಧ ಡಿಜಿ ಅವರು ಕೂಡ ಸರ್ಕ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸೋದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೋಣ ಎಂದರು.

Masjid Saaksha Tv

ಮೇ 9ರಿಂದ ಶ್ರೀರಾಮ‌ ಸೇನೆ ‘ಆಜಾನ್ ಸೇ ಆಜಾದಿ’ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡೋದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಕುರಿತು ಅಸಮಾಧಾನ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೆ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd