ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (L.K.Advani) ಅವರಿಗೆ ‘ಭಾರತ ರತ್ನ’ (Bharat Ratna) ಪ್ರಶಸ್ತಿ ನೀಡುವುದಾಗಿ ಘೋಷಿಸುತ್ತಿದ್ದಂತೆ ಹಲವರು ಸಂಭ್ರಮಿಸಿದರೆ, ಹಲವರು ಖಾರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಈ ಕುರಿತು ಮಾತನಾಡಿದ್ದಾರೆ.
ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ (Shivakumara Swamiji) ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು. ಪ್ರಧಾನಿ ಅವರು ಅಡ್ವಾಣಿಗೆ ಕೊಡಲಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ನಡೆದಾಡುವ ದೇವರು ಎಂದು ಖ್ಯಾತರಾಗಿದ್ದ ಶ್ರೀಗೆ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಯಾರೂ ಬೇಕಾದರೂ ಕೇಳಲಿ. ಯಾರು ಗೆಲ್ಲುತ್ತಾರೆಂದು ಸರ್ವೇ ಮಾಡಿ, ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.