ಯಡಿಯೂರಪ್ಪ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇವೆ : ಸುಧಾಕರ್ ಆತಂಕ Yeddyurappa
ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕುರಿತಾಗಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಸ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ಕೂಡಲೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬುದಾಗಿ ಯಾವ ಹಿನ್ನಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಸಿಎಂ ಯಡಿಯೂರಪ್ಪ ಹೇಳಿಕೆಯ ಹಿಂದೆ ಯಾವುದೇ ಉದ್ದೇಶ ಇರುತ್ತದೆ.
ಕಾಂಗ್ರೆಸ್ ನಿಂದ, ಜೆಡಿಎಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದು, ಬಿಎಸ್ ಯಡಿಯೂರಪ್ಪ ಅವರ ಮೇಲಿನ ನಂಬಿಕೆಯಿಂದ ಆಗಿದೆ. ಈಗ ಅವರೇ ಯಾಕ್ ಹೀಗೆ ಹೇಳಿದ್ದಾರೋ ಅನ್ನೋದು ಗೊತ್ತಿಲ್ಲ ಎನ್ನುವ ಮೂಲಕ ಆತಂಕ ವ್ಯಕ್ತ ಪಡಿಸಿದ್ದಾರೆ.
ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಬಿ.ಎಸ್.ಯಡಿಯೂರಪ್ಪ, “ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ ಅಲ್ಲಿಯವರೆಗೂ ನಾನು ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇದೆ” ಎಂದಿದ್ದಾರೆ.
ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಶಕ್ತಮೀರಿ ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಉಳಿದಿದ್ದು ಹೈಕಮಾಂಡ್ಗೆ ಬಿಟ್ಟ ವಿಚಾರ. ಆದ್ದರಿಂದ ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಸಿಎಂ ಬಿಎಸ್ ವೈ ಇದೇ ಮೊದಲ ಬಾರಿಗೆ ನಾಯಕತ್ವ ಬದಲಾವಣೆ ಬಗ್ಗೆ ಮೌನ ಮುರಿದಿದ್ದಾರೆ.