ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ : ಹೆಚ್ ಡಿಕೆ H DKumaraswamy saaksha tv
ಬೆಂಗಳೂರು : 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೇಸರ ಹೊರಹಾಕಿದ್ದಾರೆ.
ಇಂದು ವಿಧಾನಪರಿಷತ್ ನ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಪಕ್ಷ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಜಯ ಸಾಧಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ.
2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.
ಚುನಾವಣೆ ಎಂದರೆ ಸೋಲು–ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ.
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.