1 ಕೋಟಿ ವ್ಯಾಕ್ಸಿನ್ ಆರ್ಡರ್ ಮಾಡಿದ್ದು, ಬಂದ ಕೂಡಲೇ ಎಲ್ಲರಿಗೂ ಲಸಿಕೆ
ಚಿತ್ರದುರ್ಗ : ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಒಂದು ಕೋಟಿ ವ್ಯಾಕ್ಸಿನ್ ಆರ್ಡರ್ ಮಾಡಿದ್ದೇವೆ. ಅದು ಬಂದ ತಕ್ಷಣ ಎಲ್ಲರಿಗೂ ಲಸಿಕೆ ವಿತರಣೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಎಲ್ಲರಿಗೂ ಉಚಿತ ಲಸಿಕೆ ನೀಡುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ 2 ನೇ ಅಲೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ ಜನರಿಗಾಗಿ 1ಕೋಟಿ ಲಸಿಕೆ ಆರ್ಡರ್ ಮಾಡಿದ್ದೇವೆ. ಆದರೆ ಲಸಿಕೆ ಇನ್ನು ಬಾರದ ಹಿನ್ನಲೆಯಲ್ಲಿ ಲಸಿಕಾ ವಿತರಣೆ ವಿಳಂಬವಾಗಿದೆ.
ಮುಂದಿನ ದಿನಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸುವ ಬಗ್ಗೆ ನಿಶ್ಚಿತ ದಿನಾಂಕ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನ ಹೊರೆತು ಪಡಿಸಿ 45ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ವಿತರಣೆ ಎಂದಿನಂತೆ ಮುಂದುವರಿಯಲಿದೆ ಎಂದು ತಿಳಿಸಿದರು.
ಹಾಗೆ ಕೊರೊನಾ ಕಂಟ್ರೋಲ್ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.










