ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಆಶಯದಂತೆ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ಈ ಸರ್ಕಾವನ್ನು ವಜಾ ಮಾಡಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆರ್ಥಿಕವಾಗಿ ರಾಜ್ಯವನ್ನು ದಿವಾಳಿ ಮಾಡಿದೆ. ಮಂಡಿಸಿರುವ ಬಜೆಟ್ ಸತ್ಯಕ್ಕೆ ದೂರವಾಗಿದೆ. ಈಗ ಪಾಕಿಸ್ತಾನ ಪರ ಘೋಷಣೆ ಕೂಗಿದವರ ರಕ್ಷಣೆ ಮಾಡುತ್ತಾ ನೈತಿಕವಾಗಿಯೂ ದಿವಾಳಿಯಾಗಿದ್ದಾರೆ. ಈ ಸರ್ಕಾರ ದೇಶದ್ರೋಹಿಗಳಿಗೆ ಸಹಾಯ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ವಿಧಾನ ಸೌಧದಲ್ಲಿಯೇ ಪಾಕ್ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತಿದೆ. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ, ಜನ ಮರೆಯುವುದಿಲ್ಲ. ನಮ್ಮ ಹೋರಾಟ ನಡೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ನಡೆದು 48 ಗಂಟೆ ಕಳೆದರೂ ಇದುವರೆಗೂ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಬೇರೆ ಘಟನೆ ನಡೆದರೆ ಎಫ್‌ಎಸ್‌ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು. ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ. ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.